ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮೇ 19 ಗುರುವಾರ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಎದುರು ನೋಡುತ್ತಿರುವ ಕ್ಷಣ ನಾಳೆ ಮಧ್ಯಾಹ್ನ 12.30 ಗಂಟೆಯಾಗಿದೆ.
ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಗುರುವಾರ ಮಧ್ಯಾಹ್ನ 12.30ಕ್ಕೆ ಫಲಿತಾಂಶ ಪ್ರಕಟಿಸಲಿದ್ದಾರೆ. ನಂತರ ವೆಬ್ ಸೈಟ್ ನಲ್ಲಿ ಸಿಗಲಿದೆ. ಇದರ ಜೊತೆಗೆ ವಿದ್ಯಾರ್ಥಿಗಳು ನೀಡಿರುವ ಮೊಬೈಲ್ ಸಂಖ್ಯೆಗೂ ಫಲಿತಾಂಶ ಬರಲಿದೆ.