ಸಾಮಾನ್ಯ ವರ್ಗಕ್ಕೆ ಸಿಂದಗಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಗಾದಿ: ‘ಕೈ’ ಚುಕ್ಕಾಣಿ!

547

ಪ್ರಜಾಸ್ತ್ರ ಸುದ್ದಿ

ಸಿಂದಗಿ: ರಾಜ್ಯ ಸರ್ಕಾರ ಅಧಿಕೃತವಾಗಿ ರಾಜ್ಯದ 59 ನಗರ ಸಭೆ, 117  ಪುರಸಭೆ ಹಾಗೂ 100 ಪಟ್ಟಣ ಪಂಚಾಯ್ತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನ ರಿಲೀಸ್ ಮಾಡಿದೆ. ಈ ಮೂಲಕ ಇಷ್ಟು ದಿನಗಳಿಂದ ಕಾಯುತ್ತಿದ್ದ ಸದಸ್ಯರಿಗೆ ಬಿಗ್ ನ್ಯೂಸ್ ನೀಡಿದೆ.

ಇನ್ನು ವಿಜಯಪುರ ಜಿಲ್ಲೆ ಸಿಂದಗಿ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಗಾದಿ ಸಾಮಾನ್ಯ ವರ್ಗದ ಅಭ್ಯರ್ಥಿಯ ಪಾಲಾಗಿದೆ. ಈ ಮೂಲಕ ಎರಡೂ ಸ್ಥಾನಗಳು ಸಾಮಾನ್ಯ ವರ್ಗದ ಪಾಲಾಗಿವೆ. ಸಿಂದಗಿ ಪುರಸಭೆ ಒಟ್ಟು 23 ವಾರ್ಡ್ ಗಳನ್ನ ಹೊಂದಿದ್ದು, ಕಾಂಗ್ರೆಸ್ 11 ಸ್ಥಾನ ಪಡೆದಿದೆ. ಜೆಡಿಎಸ್ 6, ಬಿಜೆಪಿ 3 ಹಾಗೂ ಪಕ್ಷೇತರರು 3 ಸ್ಥಾನ ಗಳಿಸಿದ್ದಾರೆ. ಹೀಗಾಗಿ ಪುರಸಭೆ ಚುಕ್ಕಾಣಿ ಕಾಂಗ್ರೆಸ್ ಪಾಲಾಗುವ ಸಾಧ್ಯತೆಯಿದೆ.




Leave a Reply

Your email address will not be published. Required fields are marked *

error: Content is protected !!