ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಸಾವು

282

ಪ್ರಜಾಸ್ತ್ರ ಸುದ್ದಿ

ಗದಗ: ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಲಕ್ಷ್ಮೇಶ್ವರ ತಾಲೂಕಿನ ಗುಂಜಾಳ ರಸ್ತೆಯಲ್ಲಿ ನಡೆದಿದೆ. ಸರೋಜವ್ವ(30) ಮತ್ತು ಸೋಮವ್ವ(48) ಮೃತ ದುರ್ದೈವಿಗಳು.

ಹೊಲದಲ್ಲಿನ ಕೆಲಸ ಮುಗಿಸಿಕೊಂಡು ಮನೆಗೆ ಹೊರಟಾಗ ಈ ಘಟನೆ ನಡೆದಿದೆ. ಇದರಲ್ಲಿ ಇನ್ನು 7 ಜನರಿಗೆ ಗಾಯಗಳಾಗಿವೆ. ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಲಕ್ಷ್ಮೇಶ್ವರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!