ಅಪಘಾತದಲ್ಲಿ 26 ಜನರ ಸಾವು: 6 ಲಕ್ಷ ಪರಿಹಾರ ಘೋಷಣೆ

167

ಪ್ರಜಾಸ್ತ್ರ ಸುದ್ದಿ

ಕಾನ್ಪುರ್: ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಬರೋಬ್ಬರಿ 26 ಜನರು ಮೃತಪಟ್ಟ ದುರಂತವೊಂದು ಉತ್ತರ ಪ್ರದೇಶದ ಕಾನ್ಪುರ್ ಜಿಲ್ಲೆಯ ಘತಮ್ ಪುರದಲ್ಲಿ ನಡೆದಿದೆ. ದೇವರ ದರ್ಶನ ಪಡೆದು ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಕಳೆದ ತಡರಾತ್ರಿ ದುರಂತ ಸಂಭವಿಸಿದೆ.

ಗಾಯಾಳುಗಳನ್ನು ಹತ್ತಿರದ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲ ಫತ್ತೇಪುರದಲ್ಲಿರುವ ಚಂಡಿಕಾದೇವಿಯ ದರ್ಶನ ಪಡೆದು ವಾಪಸ್ ಆಗುತ್ತಿದ್ದರು. ರಕ್ಷಣಾ ಕಾರ್ಯಾಚರಣೆ ಮುಗಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ದುರಂತದ ಬಗ್ಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತ ಕುಟುಂಬಸ್ಥರಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.




Leave a Reply

Your email address will not be published. Required fields are marked *

error: Content is protected !!