ಟ್ರ್ಯಾಕ್ಟರ್ ಪಲ್ಟಿ: 10ಕ್ಕೂ ಹೆಚ್ಚು ಜನರಿಗೆ ಗಾಯ

302

ಪ್ರಜಾಸ್ತ್ರ ಸುದ್ದಿ

ಸಿಂಧನೂರು: ತಾಲೂಕಿನ ಗೋರೆಬಾಳ ಗ್ರಾಮದ ಬಳಿ ಟ್ರ್ಯಾಕ್ಟರ್ ಉರುಳಿ ಬಿದ್ದ ಪರಿಣಾಮ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಜಾತ್ರೆ ಮುಗಿಸಿಕೊಂಡು ಊರಿಗೆ ಹೊರಟ್ಟಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ.

ಸೋಮಲಾಪುರದಿಂದ ಜಾತ್ರೆ ಮುಗಿಸಿಕೊಂಡು ಕುರುಗೋಡುವಿಗೆ ವಾಪಸ್ ಆಗುತ್ತಿದ್ದರು. ಸಿಂಧನೂರು-ಗಂಗಾವತಿ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಇದ್ರಿಂದಾಗಿ ಮಹಿಳೆಯರು, ಮಕ್ಕಳು ಸೇರಿದಂತೆ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.




Leave a Reply

Your email address will not be published. Required fields are marked *

error: Content is protected !!