ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ: ಓರ್ವ ಸಾವು

365

ಪ್ರಜಾಸ್ತ್ರ ಸುದ್ದಿ

ಯಾದಗಿರಿ: ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮಕ್ಕಳಿಬ್ಬರು ಗಾಯಗೊಂಡ ಘಟನೆ ಯಾದಗಿರಿ-ಶಾಹಪೂರ ಮಾರ್ಗದಲ್ಲಿ ನಡೆದಿದೆ. ಸೋಮಣ್ಣ ಹಿಂದಿನಮನಿ(45) ಮೃತ ದುರ್ದೈವಿ. ಮಕ್ಕಳಾದ ಮಹೇಶ್(10) ಹಾಗೂ ಹನುಮಂತ್(12) ಗಾಯಗೊಂಡಿದ್ದಾರೆ.

ಶಹಪೂರ ತಾಲೂಕಿನ ಸಗರ ಗ್ರಾಮದ ನಿವಾಸಿ ಸೋಮಣ್ಣ ಮಕ್ಕಳನ್ನು ಕರೆದುಕೊಂಡು ಹೊರಟಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರ್ಯಾಕ್ಟರ್ ಟೈಯರ್ ಸ್ಫೋಟಗೊಂಡಿದೆ. ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಸೋಮಣ್ಣ ಮೃತಪಟ್ಟಿದ್ದು, ಮಕ್ಕಳಿಬ್ಬರು ಗಾಯಗೊಂಡಿದ್ದಾರೆ. ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ವಡಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!