ಟ್ರ್ಯಾಕ್ಟರ್, ಶಾಲಾ ಬಸ್ ಅಪಘಾತ: ನಾಲ್ವರು ವಿದ್ಯಾರ್ಥಿಗಳ ಸಾವು

122

ಪ್ರಜಾಸ್ತ್ರ ಸುದ್ದಿ

ಬಾಗಲಕೋಟೆ: ಜಮಖಂಡಿ ತಾಲೂಕಿನ ಹಲಗೂರು ಗ್ರಾಮದ ಹತ್ತಿರು ಭಾನುವಾರ ತಡರಾತ್ರಿ ನಡೆದ ಟ್ರ್ಯಾಕ್ಟರ್ ಹಾಗೂ ಶಾಲಾ ಬಸ್ ನಡುವಿನ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಇದರಲ್ಲಿ ಇಬ್ಬರು 9ನೇ ತರಗತಿ ಹಾಗೂ ಇಬ್ಬರು ಪಿಯುಸಿ ವಿದ್ಯಾರ್ಥಿಗಳೆಂದು ಹೇಳಲಾಗುತ್ತಿದೆ. ಶಾಲೆಯ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.




Leave a Reply

Your email address will not be published. Required fields are marked *

error: Content is protected !!