ಪ್ರಜಾಸ್ತ್ರ ಸುದ್ದಿ
ಒಡಿಶಾ: ಶುಕ್ರವಾರ ರಾತ್ರಿ ನಡೆದ ಮೂರು ರೈಲುಗಳ ಅಪಘಾತದಲ್ಲಿ ಬರೋಬ್ಬರಿ 288 ಜನರು ಮೃತಪಟ್ಟಿದ್ದಾರೆ. 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ, ತಪ್ಪು ಮಾಡಿದ ಯಾರನ್ನು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಇದಾದ ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಇದು ದುಃಖದ ಸಂಗತಿಯಾಗಿದೆ. ಗಾಯಾಳುಗಳಿಗೆ ಸರ್ಕಾರ ಎಲ್ಲ ರೀತಿಯ ಚಿಕಿತ್ಸೆ ನೀಡಲಿದೆ. ಮೃತರ ಕುಟುಂಬಸ್ಥರಿಗೆ ನೆರವು ನೀಡಲಾಗುವುದು ಎಂದು ತಿಳಿಸಿದರು.
ಶುಕ್ರವಾರ ರಾತ್ರಿ ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ರೈಲು ನಿಲ್ದಾಣದ ಹತ್ತಿರ ಬೆಂಗಳೂರು-ಹೌರಾ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್, ಕೋರಮಂಡಲ್ ಎಕ್ಸ್ ಪ್ರೆಸ್ ಹಾಗೂ ಗೂಡ್ಸ್ ರೈಲು ನಡುವೆ ಅಪಘಾತ ಸಂಭವಿಸಿದೆ. ಇದರಿಂದಾಗಿ 288 ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. 900ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.