ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಪುತ್ರ ವಿಕ್ರಂ ನಟನೆಯ ಮೊದಲ ಚಿತ್ರ ತ್ರಿವಿಕ್ರಮ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ. ಇದಕ್ಕಾಗಿಯೇ ವಿಶೇಷ ಕಾರ್ಯಕ್ರಮ ಆಯೋಜಿಸುವ ಮೂಲಕ ಬಿಡುಗಡೆ ದಿನಾಂಕ ಘೋಷಿಸಿದೆ.
ಜೂನ್ 24ಕ್ಕೆ ಚಿತ್ರ ರಿಲೀಸ್ ಆಗುತ್ತಿದೆ. ಆಕಾಂಕ್ಷಾ ಶರ್ಮ ವಿಕ್ರಂಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ನಟಿಗೂ ಇದು ಮೊದಲ ಚಿತ್ರ. ಸೋಮಣ್ಣ ಟಾಕೀಸ್ ಬ್ಯಾನರ್ ಅಡಿಯಲ್ಲಿ ರಾಮ್ಕೋ ಸೋಮಣ್ಣ ನಿರ್ಮಾಣ ಮಾಡಿದ್ದಾರೆ. ಸಹನಾಮೂರ್ತಿ ನಿರ್ದೇಶನ ಮಾಡಿದ್ದಾರೆ.
ಅರ್ಜುನ್ ಜನ್ಯ ಸಂಗೀತ, ವಿಜಯ್ ಪ್ರಕಾಶ್, ಸಂಚಿತ್ ಹೆಗ್ಡೆ ಹಾಡು ಹಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ನಟ ವಿಕ್ರಂ, ಇದೊಂದು ಹೈವೋಲ್ಟೇಜ್ ಲವ್ ಕಂ ಆಕ್ಷನ್ ಸಿನಿಮಾ. ಸಿನಿಮಾ ಏನು ಬೇಕೋ ಅದೆಲ್ಲವನ್ನು ಕೊಟ್ಟಿದ್ದೇನೆ. ಈಗ ಜನರಿಂದ ವಾಪಸ್ ಕೇಳುವ ಸಮಯ. ಒಂದೊಳ್ಳೆ ಸಿನಿಮಾ ಮಾಡಿದ್ದೇವೆ ಅನ್ನೋ ವಿಶ್ವಾಸವಿದೆ ಎಂದಿದ್ದಾರೆ.