ಬೈಕ್ ಗೆ ಲಾರಿ ಡಿಕ್ಕಿ: ಇಬ್ಬರ ಸಾವು

200

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಬಸ್ ಡಿಪೋ ಬಳಿ ಈ ಭೀಕರ ಘಟನೆ ನಡೆದಿದೆ. ಒಂದೇ ಬೈಕ್‌ನಲ್ಲಿ ನಾಲ್ವರು ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಈ ದುರಂತ ನಡೆದಿದೆ.

ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಅಸುನೀಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳಕ್ಕೆ ಬಸವನಬಾಗೇಬಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!