ಲಾರಿ-ಬೈಕ್ ಡಿಕ್ಕಿ: ಬೈಕ್ ಸವಾರ ಸಾವು

606

ಪ್ರಜಾಸ್ತ್ರ ಸುದ್ದಿ

ಕಾಸರಗೋಡು: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಬೇಕಲ ಸೇತುವೆ ಬಳಿ ಬುಧವಾರ ಸಂಜೆ ಈ ಘಟನೆ ನಡೆದಿದೆ.

ಬೇಕಲ ಚಿರಮ್ಮಲ್ ನಿವಾಸಿ ಬಾಬು ರಾಜ್(45) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಹೊಂಡವನ್ನ ತಪ್ಪಿಸಲು ಹೋದಾಗ ಎದುರಿಗೆ ಬರ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅನಾಹುತ ಸಂಭವಿಸಿದೆ. ಬೇಕಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!