ಉಡುಪಿ ಕಾಲೇಜು ಪ್ರಕರಣ, ಬಿಜೆಪಿ ಪ್ರತಿಭಟನೆ

85

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಉಡುಪಿ ಕಾಲೇಜುವೊಂದರಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ್ದಾರೆ ಅನ್ನೋ ಪ್ರಕರಣ ದಿನದಿಂದ ದಿನಕ್ಕೆ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದೆ. ಕಾಲೇಜು ಆಡಳಿತ ಮಂಡಳಿ ಈ ಕುರಿತು ಸ್ಪಷ್ಟನೆ ನೀಡಿದರೂ, ಇದನ್ನು ಖಂಡಿಸಿ ಬಿಜೆಪಿ ಇಂದು ಪ್ರತಿಭಟನೆ ನಡೆಸಿದೆ.

ಗೃಹ ಸಚಿವ ಜಿ.ಪರಮೇಶ್ವರ್ ನೀಡಿರುವ ಹೇಳಿಕೆ ಖಂಡಿಸಿ, ಬೆಂಗಳೂರಿನಲ್ಲಿರುವ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಶೌಚಾಲಯದಲ್ಲಿ ಗಳೆತಿಯ ವಿಡಿಯೋವನ್ನು ಅನ್ಯಕೋಮಿನ ವಿದ್ಯಾರ್ಥಿನಿಯರು ರೆಕಾರ್ಡ್ ಮಾಡಿ, ಬೇರೆಯವರಿಗೆ ಹಂಚಿಕೊಂಡಿದ್ದಾರೆ ಅನ್ನೋ ಗಂಭೀರ ಆರೋಪ ಕೇಳಿ ಬಂದಿದೆ. ಈ ಕುರಿತು ಪೊಲೀಸ್ ಇಲಾಖೆಯಿಂದ ತನಿಖೆ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!