ಈ 3 ರಾಜ್ಯಗಳ ಎಲೆಕ್ಷನ್ ತನಕ ಶಾ ರಾಷ್ಟ್ರಾಧ್ಯಕ್ಷ

362

ನವದೆಹಲಿ: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಕ್ಟೋಬರ್ ತಿಂಗಳವರೆಗೂ ಮುಂದುವರೆಯುವ ಸಾಧ್ಯತೆ ಇದೆ ಅಂತಾ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಇದಕ್ಕೆ ಕಾರಣ ಮುಂಬರುವ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆ.

ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ನಲ್ಲಿ ಈ ವರ್ಷದ ಅಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಈ ಮೂರು ರಾಜ್ಯಗಳ ಚುನಾವಣೆ ಬಳಿಕ ಜಮ್ಮು ಮತ್ತು ಕಾಶ್ಮೀರ್ ದಲ್ಲಿಯೂ ಚುನಾವಣೆ ನಡೆಯುವ ಸಾಧ್ಯತೆ ಇದೆ. ಯಾಕಂದ್ರೆ, 2018ರಿಂದ ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತವಿದೆ. ಹೀಗಾಗಿ ಈ ಎಲ್ಲಾ ಚುನಾವಣೆ ಮುಗಿಯುವ ತನಕ ಅಮಿತ್ ಶಾ ಅಧ್ಯಕ್ಷ ಗಾದಿಯಲ್ಲಿ ಮುಂದುವರೆಯಲಿ ಅಂತಾ ಬಿಜೆಪಿಯ ಪ್ರಮುಖ ನಾಯಕರು ಹಾಗೂ ಆರ್ ಎಸ್ಎಸ್ ಹೇಳಿದೆ ಎನ್ನಲಾಗ್ತಿದೆ.


TAG


Leave a Reply

Your email address will not be published. Required fields are marked *

error: Content is protected !!