ರಾಜ್ಯದಲ್ಲಿ ಇಂದು ಅಮಿತ್ ಶಾ ಚುನಾವಣೆ ಪ್ರಚಾರ

59

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ಬಳಿಕ ಕರ್ನಾಟಕದ ಕಡೆ ಮುಖ ಮಾಡದ ಕೇಂದ್ರ ಸಚಿವ ಅಮಿತ್ ಶಾ ಈಗ ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಆಗಮಿಸಿದ್ದಾರೆ. ಪ್ರಧಾನಿ ಮೋದಿ ನಂತರ ಅಮಿತ್ ಶಾ ಪ್ರಚಾರ ನಡೆಸಿದ್ದಾರೆ. ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದರು.

ಮುಂಜಾನೆ 11.30ಕ್ಕೆ ನಗರದ ಅರಮನೆ ಮೈದಾನದಲ್ಲಿ ಶಕ್ತಿ ಕೇಂದ್ರ ಪ್ರಮುಖರ ಸಮ್ಮೇಳನ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಕೋರ್ ಕಮಿಟಿ ಸಭೆ ನಡೆಯಲಿದೆ. ಸಂಜೆ 4.30ರಿಂದ ಚಿಕ್ಕಮಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಚನ್ನಪಟ್ಟಣ, ರಾಮನಗರದಲ್ಲಿಯೂ ಪ್ರಚಾರ ನಡೆಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!