ಯುಪಿ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ನಿಧನ

163

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್(82) ಸೋಮವಾರ ಮುಂಜಾನೆ ನಿಧನರಾಗಿದ್ದಾರೆ. ಗುರ್ಗಾಮ್ ದಲ್ಲಿನ ಮೇದಾಂತ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಸಮಸ್ಯೆಯಿಂದಾಗಿ ಆಗಸ್ಟ್ 22ರಂದು ಆಸ್ಪತ್ರೆಗೆ ದಾಖಲಾಗಿದ್ದರು.

ಅಕ್ಟೋಬರ್ 1ರ ತಡರಾತ್ರಿ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಇವರ ಮೊದಲ ಪತ್ನಿ ಮಾಲತಿದೇವಿ 2003ರಲ್ಲಿ ನಿಧನರಾಗಿದ್ದಾರೆ. ಸಾಧನಾ ಗುಪ್ತಾ ಇವರ ಎರಡನೇ ಪತ್ನಿಯಾಗಿದ್ದಾರೆ. ಮಣಿಪುರದಿಂದ ಲೋಕಸಭಾ ಸದಸ್ಯರಾಗಿದ್ದರು. ಇವರ ಪುತ್ರ ಅಖಿಲೇಶ್ ಯಾದವ್ ಸಹ ಸಿಎಂ ಆಗಿದ್ದರು.




Leave a Reply

Your email address will not be published. Required fields are marked *

error: Content is protected !!