ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ಅಪ್ರಾಪ್ತ ವಿದ್ಯಾರ್ಥಿನಿಯ ಅಶ್ಲೀಲ ಫೋಟೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡ್ತಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನ ಬಂಧಿಸಲಾಗಿದೆ. 25 ವರ್ಷದ ಪ್ರದೀಪ ಬಂಧಿತ ಆರೋಪಿಯಾಗಿದ್ದಾನೆ.
ಆನಂದಪುರ ಹೋಬಳಿಯ ಚೆನ್ನಶೆಟ್ಟಿಕೊಪ್ಪದವನಾಗಿದ್ದು ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ. ಹೆಗ್ಗೋಡು ಗ್ರಾಮ ಪಂಚಾಯ್ತಿಯ ಅಪ್ರಾಪ್ತೆಯೊಂದಿಗೆ ಸಲುಗೆ ಬೆಳೆಸಿದ್ದ. ಬಳಿಕ ಅಶ್ಲೀಲ ಫೋಟೋಗಳನ್ನ ತೆಗೆದುಕೊಂಡಿದ್ದ. ಆ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕ್ತಿದ್ದ ಸಂಬಂಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಮಡು ಬಂಧಿಸಲಾಗಿದೆ.