ಯುಪಿಎಸ್ ಸಿ ಫಲಿತಾಂಶ ಪ್ರಕಟ: 1016 ಅಭ್ಯರ್ಥಿಗಳ ಆಯ್ಕೆ

80

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗದ ಅಂತಿಮ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಒಟ್ಟು 1016 ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ. ಐಐಟಿ ಕಾನ್ಪುರ್ ಇಂಜಿನಿಯರ್ ಆದಿತ್ಯ ಶ್ರಿವಾಸ್ತವ್ ಪ್ರಥಮ ರ್ಯಾಂಕ್ ಪಡೆದಿದ್ದಾರೆ.

ಅನಿವೇಶ್ ಪ್ರಧಾನ್ ದ್ವಿತೀಯ ಸ್ಥಾನ, ಅನನ್ಯಾ ರೆಡ್ಡಿ ತೃತೀಯ ಸ್ಥಾನ ಪಡೆದಿದ್ದಾರೆ. ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಯಾದವರನ್ನು ಕೇಂದ್ರದ ವಿವಿಧ ಸೇವೆಗಳಿಗೆ ಶಿಫಾರಸು ಮಾಡಲಾಗಿದೆ.

ಸಾಮನ್ಯ ವರ್ಗ 347, ಒಬಿಸಿ 303, ಎಸ್ಸಿ 165, ಎಸ್ಟಿ 86, ಆರ್ಥಿಕವಾಗಿ ಹಿಂದುಳಿದ ವರ್ಗ 115, ಐಎಎಸ್ ಹುದ್ದೆಗಳಿಗೆ 180, ಐಎಫ್ಎಸ್ ಹುದ್ದೆಗಳಿಗೆ 37, ಐಪಿಎಸ್ ಹುದ್ದೆಗಳಿಗೆ 200 ಅಭ್ಯರ್ಥಿಗಳು ನೇಮಕವಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!