12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಹುದ್ದೆ ರದ್ದು

221

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇತ್ತೀಚೆಗಷ್ಟೇ ನಿಗಮ ಮಂಡಳಿಗಳ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಗೊಳಿಸಿದ್ದ ರಾಜ್ಯ ಸರ್ಕಾರ, ಇದೀಗ 12 ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಹುದ್ದೆಯನ್ನು ರದ್ದುಗೊಳಿಸಿದೆ.

ನಗರಾಭಿವೃದ್ಧಿ ಇಲಾಖೆಯ ನಿರ್ದೇಶನದಂತೆ ಕಾರ್ಯದರ್ಶಿ ಲತಾ.ಕೆ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಹಾವೇರಿ, ಹುಬ್ಬಳ್ಳಿ-ಧಾರವಾಡ, ಕೆಜಿಎಫ್, ಮಂಗಳೂರು, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಮೈಸೂರು, ಮಡಿಕೇರಿ, ಬಾಗಲಕೋಟೆ, ಕಲಬುರಗಿ ನಿಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನಾಮನಿರ್ದೇಶನ ರದ್ದುಗೊಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!