ಸ್ವೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಯು.ಟಿ ಖಾದರ್

119

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಧಾನಸಭೆ ಸಭಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ಯು.ಟಿ ಖಾದರ್ ಇಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಾಥ್ ನೀಡಿದರು.

ನಾಳೆ ಸ್ವೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದಾರೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ನಾಳೆ ಬಹುತೇಕ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಕಿರಿಯ ವಯಸ್ಸಿಗೆ ಸಭಾಧ್ಯಕ್ಷ ಸ್ಥಾನ ಅಲಂಕರಿಸಿದ ಕೀರ್ತಿ ಇವರಿಗೆ ಸಲ್ಲಲಿದೆ.




Leave a Reply

Your email address will not be published. Required fields are marked *

error: Content is protected !!