ಉ.ಕ, ಕ.ಕ ಭಾಗದಲ್ಲಿ ಉತ್ತಮ ಮಳೆ

246

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕಳೆದೊಂದು ವಾರದಿಂದ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಹವಾಮಾನ ವರದಿ ಪ್ರಕಾರ ಈ ಭಾಗದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ.

ಉತ್ತರ ಕರ್ನಾಟಕ ಜಿಲ್ಲೆಗಳಾದ ಹುಬ್ಬಳ್ಳಿ-ಧಾರವಾಡ, ಗದಗ, ಹಾವೇರಿ ಬಾಗಲಕೋಟೆ, ವಿಜಯಪುರ ಹಾಗೂ ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ಕೊಪ್ಪಳ, ಕಲಬುರಗಿ, ಯಾದಗಿರಿ, ರಾಯಚೂರು ಬಳ್ಳಾರಿಯಲ್ಲಿಯೂ ಉತ್ತಮ ಮಳೆಯಾಗುತ್ತಿದ್ದು, ರೈತರಲ್ಲಿ ಮಂದಹಾಸ ಮೂಡಿದೆ.

ವಿಜಯಪುರದಲ್ಲಿ 24 ಡಿಗ್ರಿ ಸೆಲ್ಸಿಯಸ್ ಹವಾಮಾನವಿದೆ. ಬಾಗಲಕೋಟೆ 26, ಕಲಬುರಗಿ 24, ಹುಬ್ಬಳ್ಳಿ-ಧಾರವಾಡ 23, ಬಳ್ಳಾರಿ 27, ಬೀದರ್ 23, ಕೊಪ್ಪಳ 26, ಯಾದಗಿರಿ 26, ರಾಯಚೂರು 26, ಹಾವೇರಿ 24ರಷ್ಟು ಗರಿಷ್ಠ ಡಿಗ್ರಿ ಸೆಲ್ಸಿಯಸ್ ವಾತಾವರಣವಿದೆ.




Leave a Reply

Your email address will not be published. Required fields are marked *

error: Content is protected !!