ಕಂಗನಾ ಹೇಳಿಕೆ ಹುಚ್ಚುತನವೋ ದೇಶದ್ರೋಹವೋ ಎಂದ ವರುಣ್ ಗಾಂಧಿ

203

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಬಾಲಿವುಡ್ ನಟಿ ಕಂಗನಾ ರಣಾವತ್, 1947ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ. ಅದು ಭಿಕ್ಷೆ. 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ ಎಂದು ಹೇಳಿದ್ದಳು. ಇದಕ್ಕೆ ಬಿಜೆಪಿ ಸಂಸದ ವರುಣ್ ಗಾಂಧಿ, ಟ್ವೀಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾತ್ಮ ಗಾಂಧಿ ತ್ಯಾಗ ಬಲಿದಾನಕ್ಕೆ ಅವಮಾನ. ಗಾಂಧೀಜಿ ಹಂತಕನಿಗೆ ಗೌರವ. ಈಗ ಮಂಗಲ್ ಪಾಂಡೆ, ರಾಣಿ ಲಕ್ಷ್ಮೀಬಾಯಿ, ಭಗತ್ ಸಿಂಗ್, ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸ್ ಸೇರಿದಂತೆ ಲಕ್ಷಾಂತರ ಜನರ ಹೋರಾಟ, ತ್ಯಾಗವನ್ನು ತಿರಸ್ಕಾರ ದೃಷ್ಟಿಯಿಂದ ನೋಡಿರುವುದು ಹುಚ್ಚುತನವೋ ಅಥವ ದೇಶದ್ರೋಹವೋ ಎಂದು ತಿರುಗೇಟು ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!