ವೀರಶೈವ ಲಿಂಗಾಯತ ಒಳಪಂಗಡ ಒಬಿಸಿಗೆ ಸೇರಿಸಲು ಒತ್ತಾಯ

242

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ವೀರಶೈವ ಲಿಂಗಾಯತದ ಎಲ್ಲ ಒಳಪಂಗಡಗಳನ್ನ ಸೇರಿಸಬೇಕೆಂದು ಶ್ರೀಗಳು ಒಕ್ಕೂರಲಿನಿಂದ ಒತ್ತಾಯಿಸಿದ್ದಾರೆ. ಈ ಸಂಬಂಧ ವಿಜಯನಗರದಲ್ಲಿ ರಾಷ್ಟ್ರೀಯ ವೀರಶೈವ-ಲಿಂಗಾಯತ ಮಠಾಧೀಶರ ಒಕ್ಕೂಟದ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

ತಮ್ಮ ಬೇಡಿಕೆಯನ್ನ ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಸಿಎಂ ಬಿ.ಎಸ್ ಯಡಿಯೂರಪ್ಪ ಮೂಲಕ ಮನವಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಸಿದ್ಧಪಡಿಸಿರುವ ಮನವಿ ಪತ್ರವನ್ನ ವೀರಶೈವ-ಲಿಂಗಾಯತ ಅಭಿವೃದ್ಧಿ ನಗಮದ ಅಧ್ಯಕ್ಷ ಡಾ.ಪರಮಶಿವಯ್ಯ ಅವರಿಗೆ ನೀಡಿದ್ದು, ಅವರು ಮುಖ್ಯಮಂತ್ರಿಗಳಿಗೆ ನೀಡಲಿದ್ದಾರೆ.

106 ಒಳಪಂಗಡಗಳಲ್ಲಿ 30 ಪಂಗಡಗಳಿಗೆ ಮಾತ್ರ ಮೀಸಲಾತಿ ನೀಡಲಾಗಿದೆ. ಹೀಗಾಗಿ ಕೇಂದ್ರಕ್ಕೆ ಈ ಬಗ್ಗೆ ಬೇಡಿಕೆ ಸಲ್ಲಿಸ್ತಿದ್ದೇವೆ ಎಂದು ಹೇಳಲಾಗಿದೆ. ಈ ವೇಳೆ ಶ್ರೀಶೈಲ ಜಗದ್ಗುರು ಚೆನ್ನಸಿದ್ದರಾಮ ಶಿವಾಚಾರ್ಯ, ಸ್ವಾಮೀಜಿ, ಉಜ್ಜಯಿನಿಯ ಜಗದ್ಗುರು ಮರುಳಸಿದ್ದ ಶಿವಾಚಾರ್ಯ ಸ್ವಾಮೀಜಿ, ದಿಂಗಾಲೇಶ್ವರ ಶ್ರೀಗಳು, ಸಿಂದಗಿಯ ಸಾರಂಗ ಮಠದ ಡಾ.ಪ್ರಭು ಸಾರಂಗದೇವ ಶಿವಾಚಾರ್ಯರು, ಬಸವಾನಂದ ಸ್ವಾಮೀಜಿ ಸೇರಿದಂತೆ ಹಲವು ಶ್ರೀಗಳು ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!