ಹಿರಿಯ ನಟಿ ಲೀಲಾವತಿ ಕನಸಿನ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ

287

ಪ್ರಜಾಸ್ತ್ರ ಸುದ್ದಿ

ಕನ್ನಡ ಚಿತ್ರರಂಗದ ಮೇರು ನಟಿ ಲೀಲಾವತಿ ಅವರ ಕನಸಿನ ಪಶು ಆಸ್ಪತ್ರೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಮಂಗಳವಾರ ಉದ್ಘಾಟನೆ ಮಾಡಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಹಿರಿಯ ನಟಿಯ ಆಸೆಯನ್ನು ಈಡೇರಿಸಲಾಗಿದೆ.

ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಹತ್ತಿರ ಸುಸಜ್ಜಿತವಾದ ಪಶು ಆಸ್ಪತ್ರೆಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಿಸಿದ್ದಾರೆ. ಇದನ್ನು ಉಪ ಮುಖ್ಯಮಂತ್ರಿ ನಿರ್ಮಿಸಿದ್ದಾರೆ. ಈ ಹಿಂದೆ ಈ ಭಾಗದ ಜನರಿಗಾಗಿ ಸುಸಜ್ಜಿತವಾದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಿರ್ಮಿಸಿದ್ದಾರೆ. ಇದನ್ನು ಇದೀಗ ಸರ್ಕಾರ ನೋಡಿಕೊಳ್ಳುತ್ತಿದೆ.

ಹಿರಿಯ ನಟಿಯ ಆರೋಗ್ಯ ಕ್ಷಿಣಿಸುತ್ತಿದೆ. ಹೀಗಾಗಿ ಚಿತ್ರರಂಗದ ಹಿರಿಯ ನಟ, ನಟಿಯರು, ಯುವ ನಟರು, ರಾಜಕಾರಣಿಗಳು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!