2 ಕಡೆ ಹಿರಿಯ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

239

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಹುಭಾಷಾ ಮೇರು ಹಿರಿಯ ನಟಿ ಲೀಲಾವತಿ ಅವರು ಶುಕ್ರವಾರ ಸಂಜೆ ನಿಧನರಾಗಿದ್ದಾರೆ. 86 ವರ್ಷದ ಅವರು ನೆಲಮಂಗಲದಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಡಾ.ಅಂಬೇಡ್ಕರ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬೆಳಗ್ಗೆ 5.30ರಿಂದ 10.30ರ ತನಕ ಇಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮುಂಜಾನೆ 11 ಗಂಟೆಯಿಂದ 2.30ರ ತನಕ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮೆರವಣಿಗೆ ನಡೆಯಲಿದೆ.

ಸೋಲದೇವನಹಳ್ಳಿಯಲ್ಲಿರುವ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಶಿವಶಂಕರ್ ತಿಳಿಸಿದ್ದಾರೆ. ಹಿರಿಯ ನಟಿಯ ನಿಧಣಕ್ಕೆ ಚಿತ್ರರಂಗದವರು, ರಾಜಕೀಯದವರು, ಹಿತೈಷಿಗಳು, ಕುಟುಂಬಸ್ಥರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!