ವಿಜಯ್ ಸೇತುಪತಿ ನಟನೆಯ ಸಿನಿಮಾ ಶೂಟಿಂಗ್ ವೇಳೆ ದುರಂತ

175

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಟಾಲಿವುಡ್ ಸ್ಟಾರ್ ನಟ ವಿಜಯ್ ಸೇತುಪತಿ ನಟನೆಯ ವಿಡುತಲೈ ಚಿತ್ರದ ಸಾಹಸ ದೃಶ್ಯದ ಶೂಟಿಂಗ್ ವೇಳೆ ದುರಂತವೊಂದು ಸಂಭವಿಸಿದೆ. ಸ್ಟಂಟ್ ಮ್ಯಾನ್ ಸುರೇಶ್(54) ಎಂಬುವರು ನಿಧನರಾಗಿದ್ದಾರೆ. ಇನ್ನೊಬ್ಬರಿಗೆ ಗಾಯವಾಗಿದೆ.

ಹಗ್ಗದಿಂದ ಕ್ರೇನ್ ಗೆ ಸುರೇಶ್ ಸೇರಿದಂತೆ ಇತರರಿಗೆ ಕಟ್ಟಲಾಗಿದೆ. ಈ ವೇಳೆ ಹಗ್ಗ ತುಂಡಾಗಿದೆ. ಇದರ ಪರಿಣಾಮ ಸುಮಾರು 20 ಅಡಿಯಿಂದ ಸುರೇಶ್ ಅವರು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಅದಾಗಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ವಿಡುತಲೈ ಚಿತ್ರವನ್ನು ಸ್ಟಾರ್ ನಿರ್ದೇಶಕ ವೆಟ್ರಿಮಾರನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಸ್ಟಾಲಿನ್ ಅವರ ಪುತ್ರ ಉದಯ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಹಾಸ್ಯ ನಟ ಸೂರಿ ಜೊತೆಗೆ ವಿಜಯ್ ಸೇತುಪತಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!