ಪ್ರಜಾಸ್ತ್ರ ಸುದ್ದಿ
ವಿಜಯಪುರ: ಜಿಲ್ಲಾ ಪೊಲೀಸ್ ಇಲಾಖೆಯ ಹೆಸರಲ್ಲಿ ನಕಲಿ ಫೇಸ್ ಬುಕ್ ಅಕೌಂಟ್ ಕ್ರಿಯೇಟ್ ಮಾಡಿ ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ. ಆನ್ಲೈನ್ ಮೂಲಕ ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ ಆನಂದಕುಮಾರ ಮಾಹಿತಿ ನೀಡಿದ್ದಾರೆ.
ಪೊಲೀಸ್ ಇಲಾಖೆ ಹೆಸರಲ್ಲಿ ನಕಲಿ ಅಕೌಂಟ್ ಕ್ರಿಯೇಟ್ ಮಾಡಲಾಗಿದೆ. ಹಣ ಕೇಳಿದರೆ ಯಾರೂ ಹಣ ಕೊಡಬೇಡಿ. ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಅಕೌಂಟ್ ಮಾಡಿದ್ದಾರೆ. ಯಾರೂ ಹಣ ಕೊಡಬೇಡಿ. ಇದನ್ನು ಮಾಡಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.