ಮಹಿಳಾ ವಿವಿ ಘಟಿಕೋತ್ಸವ ದಿನಾಂಕ ನಿಗದಿ

292

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 11ನೇ ಘಟಿಕೋತ್ಸವದ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 19ರಂದು ಶನಿವಾರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜ್ಞಾನಶಕ್ತಿ ಆವರಣದ ಆಡಳಿತ ಭವನದ ಎದುರು ನಿರ್ಮಿಸಿರುವ ವಿಶೇಷ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ನವದೆಹಲಿಯ ವಿಶ್ವವಿದ್ಯಾಲಯ ಅನುದಾನ ಆಯೋಗ ಸದಸ್ಯ ಪ್ರೊ.ಎಂ.ಕೆ.ಶ್ರೀಧರ ಭಾಷಣ ಮಾಡಲಿದ್ದಾರೆ. ಇದೆ ವೇಳೆ ವಿವಿಧ ಸ್ನಾತಕೋತ್ತರ ಕೋರ್ಸ್‌ ಗಳಲ್ಲಿ ಗರಿಷ್ಠ ಅಂಕಗಳನ್ನ ಪಡೆದ ಒಟ್ಟು ವಿದ್ಯಾರ್ಥಿಗಳಿಗೆ 70 ಚಿನ್ನದ ಪದಕ ಹಾಗೂ ನಗದು ಬಹುಮಾನಗಳನ್ನ ವಿತರಿಸಲಾಗುವುದು ಎಂದು ತಿಳಿಸಲಾಗಿದೆ.

ಇನ್ನು ಇದೆ ವೇಳೆ ಒಟ್ಟು 55 ವಿದ್ಯಾರ್ಥಿನಿಯರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗುತ್ತಿದೆ. ವಿಶ್ವವಿದ್ಯಾನಿಲಯದ 11ನೇ ಘಟಿಕೋತ್ಸವವನ್ನು ಯಶಸ್ವಿಯಾಗಿ ಸಂಘಟಿಸಲು ಸಕಲ ರೀತಿಯಿಂದ ಸಿದ್ಧತೆ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!