ಪ್ರಜಾಸ್ತ್ರ ಸುದ್ದಿ
ನವದೆಹಲಿ: ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಮಾದರಿ ನೀತಿಸಂಹಿತೆ ಉಲ್ಲಂಘನೆ ಆರೋಪದಡಿಯಲ್ಲಿ ಪ್ರಧಾನಿ ಮೋದಿ ಹಾಗೂ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಏಪ್ರಿಲ್ 29ರ ಬೆಳಗ್ಗೆ 11ಗಂಟೆಯೊಳಗೆ ತಮ್ಮ ಹೇಳಿಕೆಗಳಿಗೆ ಸಂಬಂಧಿಸಿದಂತೆ ಉತ್ತರ ನೀಡುವಂತೆ ಸೂಚನೆ ನೀಡಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಂಪತ್ತು ಮರು ಹಂಚಿಕೆ ಮಾಡುತ್ತೆ. ನುಸುಳುಕೋರರ, ಹೆಚ್ಚು ಮಕ್ಕಳನ್ನು ಹೊಂದಿದವರಿಗೆ ನೀಡುತ್ತೆ, ನಿಮ್ಮ ಮಾಂಗಲ್ಯಸೂತ್ರ ಸಹ ಬಿಡುವುದಿಲ್ಲವೆಂದು ಪ್ರಧಾನಿ ಮೋದಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಇನ್ನು ರಾಹುಲ್ ಗಾಂಧಿ ವಿರುದ್ಧದ ಮಾದರಿ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಉತ್ತರ ನೀಡುವಂತೆ ಸೂಚಿಸಲಾಗಿದೆ.