ಕೊಹ್ಲಿ ಮಗಳಿಗೆ ರೇಪ್ ಬೆದರಿಕೆ: ಪೊಲೀಸರಿಗೆ ನೋಟಿಸ್ ನೀಡಿದ ಮಹಿಳಾ ಆಯೋಗ

250

ಪ್ರಜಾಸ್ತ್ರ ಕ್ರೀಡಾ ಸುದ್ದಿ

ನವದೆಹಲಿ: ದುಬೈನಲ್ಲಿ ನಡೆಯುತ್ತಿರುವ ಐಸಿಸಿ ಟಿ-20 ವರ್ಲ್ಡ್ ಕಪ್ ಟೂರ್ನಿಯಲ್ಲಿ ಭಾರತ ಪಾಕಿಸ್ತಾನ್ ವಿರುದ್ಧ ಸೋಲು ಅನುಭವಿಸಿದ ನಂತರ ಸಾಕಷ್ಟು ಟೀಕೆಗಳು ಕೇಳಿ ಬಂದವು. ಕೆಲವರು ಬೌಲರ್ ಮಹಮ್ಮದ್ ಶೆಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇದರ ಜೊತೆಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿ ಅನೇಕರು ಶೆಮಿ ಪರ ನಿಂತುಕೊಂಡರು.

ಇನ್ನು ಟೀಂ ಕ್ಯಾಪ್ಟನ್ ವಿರಾಟ್ ಕೊಹ್ಲಿ ಸಹ ತನ್ನ ಸಹ ಆಟಗಾರನ ಬೆನ್ನಿಗೆ ನಿಂತುಕೊಂಡರು. ಇದಕ್ಕೆ ಕೆಲ ಕಿಡಿಗೇಡಿಗಳು ಕೊಹ್ಲಿಯ 9 ತಿಂಗಳ ಹೆಣ್ಣು ಮಗುವಿಗೆ ಅತ್ಯಾಚಾರದ ಬೆದರಿಕೆಯನ್ನು ಸೋಷಿಯಲ್ ಮೀಡಿಯಾದ ಹಾಕಿದ್ದಾರೆ. ಈ ಘಟನೆ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಮಹಿಳಾ ಆಯೋಗ ಗಂಭೀರವಾಗಿ ತೆಗೆದುಕೊಂಡು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ.

ಡೆಪ್ಯೂಟಿ ಕಮಿಷನರ್ ಆಫ್ ಪೊಲೀಸ್ ಹಾಗೂ ಕ್ರೈಂ ಬ್ರ್ಯಾಂಚ್ ವಿಭಾಗಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ನೋಟಿಸ್ ನೀಡಿದ್ದಾರೆ. ಆರೋಪಿಗಳ ವಿರುದ್ಧ ದಾಖಲಾಗಿರುವ ಎಫ್ಐಆರ್, ಅವರ ವಿವರ ತಿಳಿಸಲು ಸೂಚಿಸಲಾಗಿದೆ. ಅಲ್ದೇ, ಇದುವರೆಗೂ ಆರೋಪಿಗಳನ್ನು ಬಂಧಿಸದೆ ಇರುವ ಕ್ರಮಕ್ಕೆ ಕುರಿತಂತೆ ನವೆಂಬರ್ 8ರೊಳಗೆ ಸಲ್ಲಿಸಲು ನೋಟಿಸ್ ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!