ಮತದಾರರ ಪಟ್ಟಿ ಹಗರಣ, ಸಿಎಂ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

224

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿ ಬೊಮ್ಮಾಯಿ ರಾಜೀನಾಮೆ ನೀಡಬೇಕು. ಪ್ರಕರಣದಲ್ಲಿ ಭಾಗಿಯಾದ ಅಧಿಕಾರಿಗಳನ್ನೆಲ್ಲ ಬಂಧಿಸಬೇಕು ಎಂದಿದ್ದಾರೆ.

ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಗುರಿಯಾಗಿಟ್ಟುಕೊಂಡು ಈ ಹಗರಣ ನಡೆಸಿರುವಂತೆ ಮೇಲ್ನೋಟಕ್ಕೆ ಕಾಣಿಸುತ್ತೆ. ಮುಂದಿನ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ರಾಜ್ಯವ್ಯಾಪಿ ವಿಸ್ತರಿಸುವ ದುರುದ್ದೇಶ ಇದ್ದಂತಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಸಹ ಬಂಧಿಸಬೇಕು ಎಂದು ಕಿಡಿ ಕಾರಿದ್ದಾರೆ.

ಅಲ್ಲದೇ ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದಾರೆ. ಸರ್ಕಾರದ ಸಂವಿಧಾನ ಬಾಹಿರ ಕೃತ್ಯದ ವಿರುದ್ಧ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದಾರೆ.

ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿ, ಯು.ಟಿ ಖಾದರ್, ಶಾಸಕ ರಿಜ್ವಾನ್ ಅರ್ಷದ್, ಎಂಎಲ್ಸಿ ಸಲೀಂ ಅಹ್ಮದ್ ಸೇರಿದಂತೆ ಇತರರು ಇದ್ದರು.




Leave a Reply

Your email address will not be published. Required fields are marked *

error: Content is protected !!