ನೀರಿನ ಸಮಸ್ಯೆ: ಅಧಿಕಾರಿಗಳೊಂದಿಗೆ ಸಿಎಂ ಸಭೆ

160

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಂಗಾರುಮಳೆ ವಿಳಂಬವಾಗಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ನೀರನ ಸಮಸ್ಯೆ ಉಂಟಾಗಿದೆ. ಒಂದು ಕಡೆ ಕುಡಿಯುವ ನೀರಿನ ಸಮಸ್ಯೆ. ಮತ್ತೊಂದು ಕಡೆ ರೈತರಿಗೆ ಬಿತ್ತನೆ ಮಾಡಲು ಆಗುತ್ತಿಲ್ಲ. ಹೀಗಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ 8 ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳು, 8 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಸಿಇಒಗಳ ಜೊತೆ ವಿಡಿಯೋ ಮೂಲಕ ಸಭೆ ನಡೆಸಿ ಪರಿಹಾರ ಕ್ರಮಗಳ ಕುರಿತು ಚರ್ಚಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!