140 ಸ್ಥಾನ ಗೆದ್ದು ನಾವೇ ಸರ್ಕಾರ ರಚಿಸುತ್ತೇವೆ: ಯಡಿಯೂರಪ್ಪ

104

ಪ್ರಜಾಸ್ತ್ರ ಸುದ್ದಿ

ತುಮಕೂರು: ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಈ ಬಾರಿಯ ಚುನಾವಣೆಯಲ್ಲಿ 135 ರಿಂದ 140 ಸ್ಥಾನಗಳನ್ನು ಗೆಲ್ಲುವ ಮೂಲಕ ನಾವೇ ಸರ್ಕಾರ ರಚಿಸುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಿಪಟೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯ ಸಂಕಲ್ಪ ಯಾತ್ರೆಗೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಜನರು ಬಿಜೆಪಿ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ. ಕೇಂದ್ರದಲ್ಲಿ ಮೋದಿ ಸರ್ಕಾರ ರಾಜ್ಯ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಜನರು ಮೆಚ್ಚಿಕೊಂಡಿದ್ದು, ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದರು.




Leave a Reply

Your email address will not be published. Required fields are marked *

error: Content is protected !!