ಬಂಗಾಳದಲ್ಲಿ ಚುನಾವಣೆ ವೇಳೆ ಹಿಂಸಾಚಾರ

216

ಪ್ರಜಾಸ್ತ್ರ ಸುದ್ದಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ಮೂರು ಹಂತದಲ್ಲಿ ನಡೆಯುತ್ತಿದೆ. ಶನಿವಾರ ನಡೆಯುತ್ತಿರುವ ಮತದಾನದ ವೇಳೆ ಹಿಂಸಾಚಾರ ನಡೆದಿದೆ ಎಂದು ತಿಳಿದು ಬಂದಿದೆ.

ಟಿಎಂಸಿ, ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಕೊಚ್ ಬೆಹಾರ್ ಜಿಲ್ಲೆಯ ಫಲಿಮಾರಿ, ಬಿಸ್ವಾಸ್ ಬೂತ್, ಕದಂಬಗಚಿ, ಮರ್ಷಿದಾಬಾದ್ ಜಿಲ್ಲೆಯ ಕಪಾಸ್ ದಂಗ ಪ್ರದೇಶ ಸೇರಿದಂತೆ ಅನೇಕ ಕಡೆ ಹಿಂಸಾಚಾರ ನಡೆದಿದೆ. ಹಲವರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಹಲವು ಕಡೆ ಮತದಾನ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!