ತಾಳಿಕೋಟೆಯಲ್ಲಿ ಪತ್ನಿಯನ್ನ ಕೊಂದ ಪತಿ

355

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಹೆಂಡ್ತಿಯನ್ನ ಪತಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಗುಡ್ನಾಳ ಗ್ರಾಮದಲ್ಲಿ ನಡೆದಿದೆ. ಬಸಮ್ಮ ಕುಂಬಾರ(50) ಕೊಲೆಯಾದ ದುರ್ದೈವಿ. ಗಂಡ ಕಲ್ಲಪ್ಪ ಕುಂಬಾರ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಕುಡಿದ ನಶೆಯಲ್ಲಿ ಮನೆಗೆ ಬಂದಿದ್ದ ಪತಿ ಕಲ್ಲಪ್ಪ ಪತ್ನಿಯ ಜೊತೆ ಜಗಳವಾಡಿದ್ದಾನೆ. ಈ ವೇಳೆ ವಾಗ್ವಾದ ನಡೆದು ಕೊಡಲಿಯಿಂದ ಬೀಸಿದ್ದಾನೆ. ಅದು ಕುತ್ತಿಗೆಗೆ ತಗುಲಿ ಆಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಈ ವಿಚಾರ ತಿಳಿಯುತ್ತಿದ್ದಂತೆ ತಾಳಿಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನ ಬಂಧಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!