ನಡಗುತ್ತಿದೆ ವಿಜಯಪುರ

139

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಗುಮ್ಮಟನಗರಿಯ ಜನತೆಗೆ ಚಳಿಯಿಂದ ಗಡಗಡ ನಡಗುತ್ತಿದ್ದಾರೆ. ರಾತ್ರಿ ಮಾತ್ರವಲ್ಲ ಹಗಲು ಹೊತ್ತಿನಲ್ಲಿಯೂ ತಣ್ಣನೆಯ ಗಾಳಿ ಬೀಸುತ್ತಿದ್ದು, ಮೈನಗಡುಗಿಸುತ್ತಿದೆ. ಶೀತಗಾಳಿಯಿಂದ ಜನರು ಹೊರ ಬರಲು ಹಿಂದೇಟು ಹಾಕುವಂತಾಗಿದೆ.

ಜಿಲ್ಲೆಯಲ್ಲಿ ಮಂಗಳವಾರ ಕನಿಷ್ಠ ಉಷ್ಣಾಂಶ 10.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೇಸಿಗೆಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಗೂ ಅಧಿಕ ಉಷ್ಣಾಂಶ ದಾಖಲಾಗುವ ಮೂಲಕ ಮೈ ಸುಡುವಷ್ಟು ಬಿಸಲು ಇರುತ್ತೆ. ಈ ವರ್ಷ ಮಳೆ ಸಂಪೂರ್ಣವಾಗಿ ಕೈ ಕೊಟ್ಟಿದ್ದರೂ ಚಳಿ ಜೋರಾಗಿಯೇ ಇದೆ.

ಇನ್ನು 2-3 ಡಿಗ್ರಿ ಸೆಲ್ಸಿಯಸ್ ನಷ್ಟು ಉಷ್ಣಾಂಶ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಟ್ಟಿನಲ್ಲಿ ನಡಗುವ ಚಳಿಗೆ ಜನರು ಹೈರಾಣಾಗಿದ್ದಾರೆ.

ಸಾಂದರ್ಭಿಕ ಚಿತ್ರ




Leave a Reply

Your email address will not be published. Required fields are marked *

error: Content is protected !!