ಹಟ್ಟಿ ಚಿನ್ನದ ಗಣಿ ಹತ್ತಿರ ಮಹಿಳೆ ಶವ ಪತ್ತೆ

236

ಪ್ರಜಾಸ್ತ್ರ ಅಪರಾಧ ಸುದ್ದಿ

ಲಿಂಗಸುಗೂರು: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಹತ್ತಿರ ನಡೆದಿದೆ. ಮಂಜುಳಾ(45) ಮೃತ ಮಹಿಳೆ ಎಂದು ಹೇಳಲಾಗುತ್ತಿದೆ.

ಚಿನ್ನದ ಗಣಿ ಕ್ಯಾಂಪಿನ ಗುಂಡುರಾವ್ ಕಾಲೋನಿಯಲ್ಲಿ ಶವ ಪತ್ತೆಯಾಗಿದೆ. ಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಲ್ಯಾಬ್ ಟೆಕ್ನಿಷಿಯೇನ್ ಮಂಜುಳಾ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಕೊಲೆ ಮಾಡಿ ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!