ಪ್ರಜಾಸ್ತ್ರ ಅಪರಾಧ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯ ಭೀಕರ ಹತ್ಯೆ ನಡೆದಿದೆ. ನಗರದ ನಂಜಪ್ಪ ಸರ್ಕಲ್ ಹತ್ತಿರದ ಮನೆಯೊಂದರಲ್ಲಿ ಮಹಿಳೆಯ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಕೌಸರ್ ಮುಬೀನ್(34) ಹತ್ಯೆಯಾದ ಮಹಿಳೆಯಾಗಿದ್ದಾರೆ.
ಯಾವ ಕಾರಣಕ್ಕೆ ಮಹಿಳೆಯನ್ನು ಕೊಲೆ ಮಾಡಲಾಗಿದೆ ಅನ್ನೋದು ಇನ್ನು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಿಂದ ಸುತ್ತಲಿನ ಜನರಿಗೆ ಭಯ ಆವರಿಸಿಕೊಂಡಿದೆ.