ಮಹಿಳೆಯ ಭೀಕರ ಹತ್ಯೆ

303

ಪ್ರಜಾಸ್ತ್ರ ಅಪರಾಧ ಸುದ್ದಿ

ಮಂಡ್ಯ: ಮನೆಗೆ ನುಗ್ಗಿ ಮಹಿಳೆಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಕೆ.ಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಪುಷ್ಪಲತಾ ಕೊಲೆಯಾದ ಮಹಿಳೆಯಾಗಿದ್ದಾರೆ.

ಪುಷ್ಪಲತಾ ಪತಿ 10 ವರ್ಷಗಳ ಹಿಂದೆ ನಿಧನರಾಗಿದ್ದಾರೆ. ಮೆಡಿಕಲ್ ಶಾಪ್ ಇಟ್ಟುಕೊಂಡಿದ್ದ ಪುಷ್ಪಲತಾ ಒಂಟಿಯಾಗಿ ವಾಸವಾಗಿದ್ದಳು. ಮಧ್ಯಾಹ್ನ ಮನೆಗೆ ಊಟಕ್ಕೆ ಬಂದ ಸಂದರ್ಭದಲ್ಲಿ ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!