ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಗರದ ಮೈಕೋ ಲೇಔಟ್ ಪೊಲೀಸ್ ಠಾಣೆಯ ಮಹಿಳಾ ಪೇದೆ ಮಂಜುಶ್ರೀ(27) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಮಂಜುಶ್ರೀ ಇತ್ತೀಚೆಗಷ್ಟೇ ಶಿವಾಜಿನಗರ ಠಾಣೆಗೆ ವರ್ಗಾವಣೆಯಾಗಿದ್ದರು. ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರದ ಮಂಜುಶ್ರೀ ಊರಿಗೆ ಬಂದಿದ್ದರು. ಶುಕ್ರವಾರ ರಾತ್ರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.