ಕೋರ್ಟ್ ಸಮನ್ಸ್, ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

345

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು: ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು ಅನ್ನೋ ಪ್ರಕರಣ ಸಂಬಂಧ ಕೋರ್ಟ್ ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಜಿಲ್ಲೆಯ ಮೂಡಗೆರೆ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ.

ಹಳೇ ಮೂಡಿಗೆರೆ ಗ್ರಾಮದ ಶಿಲ್ಪಾ ಎಂಬುವರು ಪೊಲೀಸ್ ಠಾಣೆಗೆ ಬಂದು ಕಟ್ಟಡ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಲ್ಲಿರುವ ಅಧಿಕಾರಿಗಳು, ಸಿಬ್ಬಂದಿ ಜನರು ಅವರಿಗೆ ತಿಳಿ ಹೇಳುವ ಕೆಲಸ ಮಾಡಿದರು. ಇದರ ವಿಡಿಯೋ ಇದೀಗ ವೈರಲ್ ಆಗಿದೆ. ಘಟನೆ ಕುರಿತು ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.




Leave a Reply

Your email address will not be published. Required fields are marked *

error: Content is protected !!