ಶೌಚಾಲಯಕ್ಕೆ ಆಗ್ರಹಿಸಿ ಸಿಂದಗಿಯಲ್ಲಿ ಪ್ರತಿಭಟನೆ

241

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಮಗೆ ಶೌಚಾಲಯ ನಿರ್ಮಿಸಿ ಕೊಡಬೇಕೆಂದು ಆಗ್ರಹಿಸಿ ತಾಲೂಕು ಪಂಚಾಯ್ತಿ ಕಚೇರಿ ಮುಂದೆ ಮಹಿಳೆಯರು ಮಂಗಳವಾರ ದಿಢೀರ್ ಪ್ರತಿಭಟನೆ ನಡೆಸಿದರು. ತಾಲೂಕಿನ ಚಾಂದಕವಟೆ ಗ್ರಾಮದ ಮಹಿಳೆಯರು ಪ್ರತಿಭಟನೆ ನಡೆಸಿದರು.

ಹಲಿಗೆ ಬಾರಿಸುತ್ತಾ, ಅಧಿಕಾರಿಗಳ ವಿರುದ್ಧ, ಗ್ರಾಮ ಪಂಚಾಯ್ತಿ ಸದಸ್ಯರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ತಾಲೂಕು ಪಂಚಾಯ್ತಿ ಸಿಎಸ್ ಭೇಟಿ ನೀಡಬೇಕೆಂದು ಪಟ್ಟು ಹಿಡಿದರು. ಅಲ್ದೇ, ಸರ್ಕಾರದಿಂದ ಶೌಚಾಲಯಕ್ಕೆ ಮೀಸಲಿಟ್ಟ ಸರ್ಕಾರಿ ಜಾಗ ಕಬಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಕೂಡಲೇ ನಮ್ಮ ಬೇಡಿಕೆ ಈಡೇರಿಸದಿದ್ದೆ ಉಗ್ರ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದರು.


TAG


Leave a Reply

Your email address will not be published. Required fields are marked *

error: Content is protected !!