ಭಾರತ-ಆಸ್ಟ್ರೇಲಿಯಾ ನಡುವೆ ಫೈನಲ್ ಫೈಟ್

355

ಮಹಿಳಾ ಟಿ-20 ವರ್ಲ್ಡ್ ಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ 6 ರನ್ ಗಳ ಗೆಲುವು ದಾಖಲಿಸಿದೆ. ಈ ಮೂಲಕ ಆಸೀಸ್ ಟೀಂ ಫೈನಲ್ ತುಲುಪಿದೆ.

ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಆಸ್ಟ್ರೇಲಿಯಾ ಟೀಂ, 5 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿತ್ತು. ದಕ್ಷಿಣ ಆಫ್ರಿಕಾದ ಬ್ಯಾಟಿಂಗ್ ಶುರುವಾಗುವಷ್ಟರಲ್ಲಿ ಮಳೆ ಆರಂಭವಾಯ್ತು. ಬಳಿಕ 13 ಓವರ್ ಗೆ 98 ರನ್ ಗಳಿಸುವ ಟಾರ್ಗೆಟ್ ನೀಡಲಾಯ್ತು. ಆದ್ರೆ, ಸೌಥ್ ಆಫ್ರಿಕಾ 5 ವಿಕೆಟ್ ಕಳೆದುಕೊಂಡು 92 ರನ್ ಗಳಿಸಿ 6 ರನ್ ಗಳ ಅಂತರದಿಂದ ಸೋಲು ಅನುಭವಿಸಿತು.

ನಾಲ್ಕು ಬಾರಿ ಟಿ-20 ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ ಮತ್ತೊಮ್ಮೆ ಫೈನಲ್ ತಲುಪಿದೆ. ಮಾರ್ಚ್ 8 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತವನ್ನ ಎದುರಿಸಲಿದೆ. ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡ್ತಿರುವ ಟೀಂ ಇಂಡಿಯಾ ಆಸೀಸ್ ಮಣಿಸಿ ವರ್ಲ್ಡ್ ಚಾಂಪಿಯನ್ಸ್ ಆಗುವ ತವಕದಲ್ಲಿದೆ.




Leave a Reply

Your email address will not be published. Required fields are marked *

error: Content is protected !!