ಖ್ಯಾತ ಲೇಖಕಿ ನಾಡೋಜ ಸಾರಾ ಅಬೂಬಕ್ಕರ್ ನಿಧನ

234

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಖಾತ ಲೇಖಕಿ ಸಾರಾ ಅಬೂಬಕ್ಕರ್(87) ಅವರು ಮಂಗಳವಾರ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಗಡಿನಾಡು ಕಾಸರಗೋಡಿನಲ್ಲಿ ಜೂನ್ 30, 1936ರಲ್ಲಿ ಜನಿಸಿದರು. ಜಾತಿ, ಧಾರ್ಮಿಕ ಅಸಮಾನತೆ, ಮಹಿಳಾ ಅಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ಸಂವೇಧನಾಶೀಲ ಬರವಣೆಗೆ ಮೂಲಕ ಸಾಕಷ್ಟು ಖ್ಯಾತಿ ಗಳಿಸಿದವರು.

10 ಕಾದಂಬರಿ, 5 ಕಥಾ ಸಂಕಲನ, 5 ರೇಡಿಯೋ ನಾಟಕ ಸೇರಿದಂತೆ ಸಾಹಿತ್ಯ ಪ್ರಕಾರದ ಹಲವು ಕೃತಿಗಳನ್ನು ರಚಿಸಿದ್ದಾರೆ. ಅವರ ಮೊದ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಸಾಕಷ್ಟು ಜನಪ್ರಿಯತೆ ಪಡೆಯಿತು.

ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ‘ಸಹನಾ’ಕಾದಂಬರಿಗೆ ವರ್ಧಮಾನ ಪ್ರಶಸ್ತಿ, ‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ ಮತ್ತು ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಸೇರಿ ಹಲವು ಪ್ರತಿಷ್ಠಿತ ಪ್ರಶಸ್ತಿ ಗೌರವಗಳು ಇವರಿಗೆ ಸಂದಿವೆ.

ಇವರ ನಿಧನಕ್ಕೆ ಕನ್ನಡ ಸಾಹಿತ್ಯ ಲೋಕದ ದಿಗ್ಗಜರು ಸೇರಿದಂತೆ ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!