ವರ್ಷಾಂತ್ಯಕ್ಕೆ 6025 ಗ್ರಾ.ಪಂ ಚುನಾವಣೆ!

347

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇದೀಗ ಸ್ಥಳೀಯ ಚುನಾವಣೆಯ ಚರ್ಚೆ ನಡೆಯುತ್ತಿದೆ. ಗ್ರಾಮ ಪಂಚಾಯ್ತಿಗಳ ಸದಸ್ಯರ ಅವಧಿ ಮುಗಿದು ಆಡಳಿತಾಧಿಕಾರಿ ನೇಮಕವಾಗಿದೆ. ಹೀಗಾಗಿ ಚುನಾವಣೆ ಯಾವಾಗ ಎಂದು ಕೇಳುತ್ತಿದ್ದಾರೆ. ಸಧ್ಯದ ಮಾಹಿತಿ ಪ್ರಕಾರ ರಾಜ್ಯ ಚುನಾವಣಾ ಆಯೋಗ ಈ ವರ್ಷಾಂತ್ಯಕ್ಕೆ ಗ್ರಾಮ ಪಂಚಾಯ್ತಿಗಳ ಎಲೆಕ್ಷನ್ ನಡೆಸುವ ಸಾಧ್ಯತೆಯಿದೆ.

ರಾಜ್ಯದಲ್ಲಿ 6025 ಗ್ರಾಮ ಪಂಚಾಯ್ತಿಗಳ ಅವಧಿ ಜೂನ್-ಜುಲೈನಲ್ಲಿ ಮುಗಿದಿದೆ. ಕೋವಿಡ್ 19 ಹಿನ್ನೆಲೆಯಲ್ಲಿ ಸ್ಥಳೀಯ ಚುನಾವಣೆಯನ್ನ ಮೇ ತಿಂಗಳಲ್ಲಿ ಮುಂದೂಡಲಾಗಿತ್ತು. ಇದನ್ನ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಮೀಸಲಾತಿ ಪಟ್ಟಿ ಸಿದ್ಧವಾಗ್ತಿದೆ. ಇದರ ಜೊತೆಗೆ ಮತಕ್ಷೇತ್ರಗಳಲ್ಲಿನ ಸುರಕ್ಷತೆ, ಸಿದ್ಧತೆಗೆ ಬೇಕಾಗುವ ಖರ್ಚು, ಮತದಾರರ ಪಟ್ಟಿ, ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ಸೇರಿದಂತೆ ಹಲವು ವಿಷಯಗಳಿದ್ದು, ಇನ್ನು ಎರಡು ತಿಂಗಳು ಸಮಯ ಬೇಕಾಗುತ್ತೆ.

ಈ ಎಲ್ಲ ಕಾರಣಗಳಿಂದ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಈ ಸಂಬಂಧ ಕೇಂದ್ರ ಚುನಾವಣಾ ಆಯೋಗ ಹೊರಡಿಸಿರುವ ಹೊಸ ಮಾರ್ಗಸೂಚಿ ಅನ್ವಯ ಚುನಾವಣೆ ನಡೆಸಲು ತಯಾರಿ ನಡೆಸಲಾಗ್ತಿದೆ ಎಂದು ಅಧಿಕಾರಿಗಳು ಹೇಳ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!