ಗೋಳಗುಮ್ಮಟ ಆವರಣದಲ್ಲಿ ಯೋಗ ದಿನಾಚರಣೆ

266

ಪ್ರಜಾಸ್ತ್ರ ಸುದ್ದಿ

ವಿಜಯಪುರ: ವಿಶ್ವದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಗೋಳಗುಮ್ಮಟದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಯೋಗ ದಿನ ಆಚರಿಸಲಾಯಿತು.

ನಗರದ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಸಂಘಟನೆಗಳ ಕಾರ್ಯಕರ್ತರು, ಸಾರ್ವಜಿಕರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಯೋಗ ದಿನ ಆಚರಿಸಿದರು. ಅಲ್ದೇ, ಮೈಸೂರಿನಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಯೋಗ ದಿನವನ್ನು ವೀಕ್ಷಣೆ ಮಾಡಲು ಅವಕಾಶ ಮಾಡಿಕೊಡಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಉಮೇಶ್ ಕತ್ತಿ, ಶಾಸಕ ಯತ್ನಾಳ, ರಾಜ್ಯ ಬೀಜ ನಿಗಮದ ಅಧ್ಯಕ್ಷ ವಿಜುಗೌಡ ಪಾಟೀಲ, ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಜಿಲ್ಲಾಧಿಕಾರಿ ವಿಜಯ ಮಹಾಂತೇಶ, ಎಸ್ಪಿ ಆನಂದಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಸೇರಿದಂತೆ ಅನೇಕರು ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!