ಯೋಗೀಶಗೌಡ ಕೊಲೆ ಕೇಸ್: ಮಾಫಿ ಸಾಕ್ಷಿಗೆ ಒಪ್ಪಿಗೆ

216

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಹತ್ಯೆ ಪ್ರಕರಣದ 17ನೇ ಆರೋಪಿ ಶಿವಾನಂದ ಶ್ರೀಶೈಲ ಬಿರಾದಾರಗೆ ಮಾಫಿ ಸಾಕ್ಷಿಯಾಗಲು ಹೈಕೋರ್ಟ್ ಒಪ್ಪಿಗೆ ನೀಡಿದೆ.

ಈ ಹಿಂದೆ ಸೆಷನ್ಸ್ ಕೋರ್ಟ್ ಅನುಮತಿ ನಿರಾಕರಿಸಿದ್ದನ್ನು ಪ್ರಶ್ನಿಸಿ ವಿಜಯಪುರದ ಶಿವಾನಂದ ಶ್ರೀಶೈಲ ಬಿರಾದಾರ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾ.ಕೆ.ನಟರಾಜನ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಈ ಆದೇಶ ಹೊರಡಿಸಿದೆ. ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಬಹುತೇಕ ಸಾಂದರ್ಭಿಕ ಸಾಕ್ಷಿಗಳಿರುವ ಹಿನ್ನೆಲೆಯಲ್ಲಿ ಮಾಫಿ ಸಾಕ್ಷಿಯಾಗಿಸಿದರೆ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲು ಅನುಕೂಲ ಆಗಲಿದೆ. ಹಾಗಾಗಿ, ಅಪರಾಧ ದಂಡ ಸಂಹಿತೆ (ಸಿಆರ್ ಪಿಸಿ) ಸೆಕ್ಷನ್ 306 ರಡಿ ಹೇಳಿಕೆ ದಾಖಲಿಸಲು ಅಪ್ರೋವರ್ ಆಗಲು ಅನುಮತಿ ನೀಡಬೇಕೆಂದು ಆರೋಪಿ ಪಿಸ್ತೂಲ್ ನೀಡಿದ್ದನೆಂದು ಆರೋಪಿಸಲಾಗಿದೆ.

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಈ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಪ್ರಮುಖ ಆರೋಪಿತರಾಗಿದ್ದಾರೆ. ಹಾಗಾಗಿ, ಅಪ್ರೋವರ್ ಆಗಲು ಕೋರ್ಟ್ ಅನುಮತಿ ನೀಡಬೇಕೆಂದು ಆರೋಪಿ ಶಿವಾನಂದ ಬಿರಾದಾರ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ. ಆದರೆ, 2022ರ ಜು.14ರಂದು ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಅನುಮತಿ ನಿರಾಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.




Leave a Reply

Your email address will not be published. Required fields are marked *

error: Content is protected !!