ನೇಣಿಗೆ ಶರಣಾದ ಯುವಕ!

284

ಪ್ರಜಾಸ್ತ್ರ ಸುದ್ದಿ

ದೇವರಹಿಪ್ಪರಗಿ: ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಯುವಕನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಟ್ಟಣದ ನಿವಾಸಿ ಪರಶುರಾಮ ಮಲ್ಲಪ್ಪ ನಾಯ್ಕೋಡಿ(25) ಮೃತ ಯುವಕ.

ಇಂಗಳಗಿ ಗ್ರಾಮದಲ್ಲಿರುವ ಮಾವನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ತಾಯಿ ಕಳೆದ ವರ್ಷ ಮೃತಪಟ್ಟಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿದ್ದನಂತೆ. ಹೀಗಾಗಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅನ್ನೋ ಶಂಕೆ ವ್ಯಕ್ತವಾಗಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವರಹಿಪ್ಪರಗಿ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!