ಯುವಕನ ಮೆದುಳು ನಿಷ್ಕ್ರಿಯ: ಅಂಗಾಂಗ ದಾನ

175

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಹಳೆ ವೈಷಮ್ಯದ ಹಿನ್ನೆಲೆ ದುಷ್ಕರ್ಮಿಗಳಿಂದ ಗಂಭೀರ ಹಲ್ಲೆಗೊಳಗಾಗಿ ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗವನನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ. ಈ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ತಾಲೂಕಿನ ಮಲ್ಲನಾಯಕನಹಳ್ಳಿ ಗ್ರಾಮದ ಸಚಿನ್, ಸಂಬಂಧಿಕರಿಂದಲೇ ಹಲ್ಲೆಗೊಳಗಾದ ಯುವಕ. 12 ದಿನಗಳ ಬಳಿಕ ಆತನ ಮೆದುಳು ನಿಷ್ಕ್ರಿಯಗೊಂಡಿದೆ. ಹೀಗಾಗಿ ಬೇರೆಯವರ ಬಾಳಿನಲ್ಲಾದರೂ ಬೆಳಕಾಗಲಿ ಎಂದು ಅಂಗಾಂಗ ದಾನ ಮಾಡಲಾಗಿದೆ.

ಬೆಂಗಳೂರಿನಲ್ಲಿ ಆಟೋ ಚಾಲಕನಾಗಿದ್ದ ಸಚಿನ್, ಊರ ಹಬ್ಬಕ್ಕಾಗಿ ಬಂದಿದ್ದ. ಅಕ್ಟೋಬರ್ 10ರಂದು ಸಚಿನ್ ಸಂಬಂಧಿಕರೆ ಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸಚಿನಗೆ ಮೊದಲು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ನಂತರ ಮಂಡ್ಯದ ಮಿಮ್ಸ್ ಗೆ ದಾಖಲಿಸಲಾಯಿತು. ಈಗ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ತಂದೆ ಲಿಂಗರಾಜು ಸೇರಿ ಕುಟುಂಬಸ್ಥರು ಅಂಗಾಂಗ ದಾನ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!