ಸ್ವಾಮಿ ವಿವೇಕಾನಂದರು ಯುವಜನತೆಗೆ ಸ್ಪೂರ್ತಿ: ಪ್ರಧಾನಿ ಮೋದಿ

126

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಸ್ವಾಮಿ ವಿವೇಕಾನಂದರ ಜಯಂತಿ ಹಿನ್ನೆಲೆಯಲ್ಲಿ ನಡೆಸಿಕೊಂಡು ಬರುತ್ತಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದರು. ರೈಲ್ವೆ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದಕ್ಕೂ ಮೊದಲು ನಗರದಲ್ಲಿ ಭರ್ಜರಿಯಾಗಿ ರೊಡ್ ಶೋ ನಡೆಸಿದರು.

ಕನ್ನಡದಲ್ಲಿ ಮಾತು ಆರಂಭಿಸಿದ ಪ್ರಧಾನಿ ಮೋದಿ, ಮೂರುಸಾವಿರ ಮಠ, ಸಿದ್ಧಾರೂಢ ಮಠ ಸೇರಿದಂತೆ ಹಲವು ಮಠಗಳ, ರಾಣಿ ಚೆನ್ನಮ್ಮ ನಾಡು, ಸಂಗೊಳ್ಳಿ ರಾಯಣ್ಣ ಬೀಡು ಈ ಪುಣ್ಯ ಭೂಮಿಗೆ ನನ್ನ ನಮಸ್ಕಾರಗಳು ಎಂದರು. ಕರ್ನಾಟಕ ಇಲ್ಲಿನ ಸಂಸ್ಕೃತಿ, ಪರಂಪರೆ, ಜ್ಞಾನಿಗಳ ವಿಚಾರಕ್ಕೆ ಪ್ರಸಿದ್ಧಿಯಾಗಿದೆ. ಇಲ್ಲಿ ಅನೇಕರು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಸಂಗೀತ ಕ್ಷೇತ್ರದಲ್ಲಿ ದೇಶದಲ್ಲಿಯೇ ಸಾಧನೆ ಮಾಡಿದ ಪಂಡಿತ ಕುಮಾರ ಗಂಧರ್ವ, ಪಂಡಿತ ರಾಜಗುರು, ಪಂಡಿತ ಮಲ್ಲಿಕಾರ್ಜುನ ಮನ್ಸೂರ, ಭಾರತರತ್ನ ಭೀಮಸೇನ್ ಜೋಶಿ, ಪಂಡಿತ ಗಂಗೂಬಾಯಿ ಹಾನಗಲ್ ಅವರಿಗೆ ನನ್ನ ನಮಸ್ಕಾರಗಳು ಎಂದರು. ರಾಷ್ಟ್ರೀಯ ಯುವ ದಿನ ತುಂಬಾ ವಿಶೇಷವಾಗಿದೆ. ಜೊತೆಗೆ ಇದು ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಆಗಿದೆ. ಏಳು ಎದ್ದೇಳ್ರಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂದು ಸ್ವಾಮಿ ವಿವೇಕಾನಂದರ ಮಾತುಗಳನ್ನು ಹೇಳುವ ಮೂಲಕ, ಯುವ ಜನತೆ ತಮ್ಮ ಕರ್ತವ್ಯವನ್ನು ಹೇಗೆ ನಿಭಾಯಿಸುವ ಮೂಲಕ ದೇಶವನ್ನು ಮುನ್ನಡೆಸಬೇಕು ಅನ್ನೋದು ಸ್ವಾಮಿ ವಿವೇಕಾನಂದರು ಯುವಜನತೆಗೆ ಸ್ಪೂರ್ತಿಯಾಗಿದ್ದಾರೆ ಎಂದರು.

ಇಂದಿನಿಂದ 5 ದಿನಗಳ ಕಾಲ 26ನೇ ಯುವಜನೋತ್ಸವ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿದೆ. ದೇಶದ ವಿವಿಧ ರಾಜ್ಯಗಳ ಸಾವಿರಾರು ಸಂಖ್ಯೆಯಲ್ಲಿ ಪ್ರತಿಭೆಗಳು ಭಾಗವಹಿಸಲಿವೆ.




Leave a Reply

Your email address will not be published. Required fields are marked *

error: Content is protected !!