ಬೇಗ್ ಮನೆ ಮೇಲೆ ಇಡಿ.. ಖಾನ್ ಮನೆ ಮೇಲೆ ಐಟಿ ರೇಡ್..

519

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಾಜಿ ಸಚಿವರಾದ ರೋಷನ್ ಬೇಗ್ ಹಾಗೂ ಜಮೀರ್ ಅಹ್ಮದ್ ಖಾನ್ ಗೆ ಇಡಿ ಹಾಗೂ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಗುರುವಾರ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಶಾಸಕ ಜಮೀರ್ ಅಹ್ಮದ್ ಖಾನ್ ಮೇಲೆ ದಾಳಿ ಮಾಡಿದ್ದಾರೆ.

ಟಂಟೋನ್ಮೆಂಟ್ ರೈಲ್ವೆ ನಿಲ್ದಾಣ ಬಳಿಯಿರುವ ಅವರ ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರ ಜೊತೆಗೆ ಅವರ ಕಚೇರಿ, ಫ್ಲಾಟ್ ಸೇರಿ ಇತರೆ ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಅಲ್ದೇ, ಅವರ ಪಿಎ ಮನೆ ಸೇರಿ 6 ಕಡೆ ದಾಳಿ ನಡೆಸಿದ್ದಾರೆ.

ಇನ್ನು ರೋಷನ್ ಬೇಗ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಐಎಎಂ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಗ್ ಮನೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಮೂಲಕ ಇಬ್ಬರು ನಾಯಕರಿಗೆ ಶಾಕ್ ಕೊಟ್ಟಿದ್ದಾರೆ.




Leave a Reply

Your email address will not be published. Required fields are marked *

error: Content is protected !!